ಕ್ರೀಡಾ ಸಚಿವರ ಮುಂದೆ ಈ ಎಲ್ಲಾ ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸಾಕಷ್ಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಇಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ತಿಳಿಸಿದ್ದಾರೆ.

ಭಾರತದ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯಾಗಬೇಕು, ಮಹಿಳಾ ಮುಖ್ಯಸ್ಥರ ನೇಮಕವಾಗಬೇಕು, ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬದ ಯಾರೇ ಆದರೂ ಡಬ್ಲ್ಯುಎಫ್‌ಐನ ಭಾಗವಾಗಿರಬಾರದು, ಬ್ರಿಜ್ ಭೂಷಣ್ ಸಿಂಗ್ ಬಂಧನದ ಬೇಡಿಕೆಯನ್ನು ಇಟ್ಟಿದ್ದಾರೆ. ಕಳೆದ ವಾರವಷ್ಟೇ ಗೃಹಸಚಿವ ಅಮಿತ್ ಶಾ ಅವರನ್ನು ಕುಸ್ತಿಪಟುಗಳು ಭೇಟಿ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!