ಗೃಹ ಸಚಿವರನ್ನು ಭೇಟಿ ಮಾಡಿದ ಕುಸ್ತಿಪಟುಗಳು, ಶಾ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆಗೆ ಇಳಿದು ತಿಂಗಳುಗಳೇ ಕಳೆದಿವೆ.

ಭಾನುವಾರ ರಾತ್ರಿ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೃಹಕ್ಕೆ ತೆರಳಿ ಮಾತನಾಡಿದ್ದಾರೆ. ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ನಿಷ್ಪಕ್ಷವಾದ ತನಿಖೆಯಾಗಬೇಕು, ದಯವಿಟ್ಟು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು,ಕಾನೂನು ಎಲ್ಲರಿಗೂ ಒಂದೇ, ಕಾನೂನು ಅವಲೋಕಿಸಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಅಮಿತ್ ಶಾ ಕುಸ್ತಿಪಟುಗಳು ಹಾಗೂ ಭೂಷಣ್ ಸಿಂಗ್ ನಡುವಿನ ಸಮರವನ್ನು ಕಾನೂನಿನ ಕೈಗೆ ಒಪ್ಪಿಸಿದ್ದು, ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!