ಕುಸ್ತಿ ಫೆಡರೇಷನ್‌ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬ್ರಿಜ್‌ ಭೂಷಣ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್‌ ಭೂಷಣ್‌ ಕುಸ್ತಿ ಫೆಡರೇಷನ್‌ನಿಂದ ‘ಸನ್ಯಾಸತ್ವ’ ಸ್ವೀಕರಿಸಿರುವುದಾಗಿ ಘೋಷಿಸಿದ್ದಾರೆ.

ಕ್ರೀಡಾ ಸಚಿವಾಲಯ ನೂತನ ಕುಸ್ತಿ ಫೆಡರೇಷನ್‌ ಸಮಿತಿಯನ್ನೇ ಅಮಾನತುಗೊಳಿಸಿದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮಾಡುವ ಕೆಲಸಗಳು ಸಾಕಷ್ಟಿವೆ. ಮತ್ತೆ ಭಾರತೀಯ ಕುಸ್ತಿ ಫೆಡರೇಷನ್‌ (WFI) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಬ್ರಿಜ್‌ ಭೂಷಣ್‌ ಈ ಸೂಚನೆ ಕೊಟ್ಟಿದ್ದಾರೆ. ಬ್ರಿಜ್ ಭೂಷಣ್ ಅವರು ಕುಸ್ತಿಯಿಂದ ನಿವೃತ್ತಿ ತೆಗೆದುಕೊಂಡಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಬೀದಿಗಿಳಿದ ಪ್ರತಿಭಟಿಸಿದ ನಂತರ ಬ್ರಿಜ್ ಭೂಷಣ್, WFI ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಆ ಸ್ಥಾನಕ್ಕೆ ತಮ್ಮ (ಬ್ರಿಜ್‌ ಭೂಷಣ್) ಆಪ್ತರೇ ಆಯ್ಕೆಯಾಗುವಂತೆ ಮಾಡಿದ್ದಕ್ಕೆ‌, ಮತ್ತೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!