ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಣೆಗೆ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿ ಆದೇಶ ವಿಚಾರವಾಗಿ ದರ ಮಿತಿ ಪ್ರಶ್ನಿಸಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಮಂಡಳಿಯ ಮನವಿಯ ಮೇರೆಗೆ ಸರ್ಕಾರ ನಿರ್ಧರಿಸಿದೆ ಎಂದು ವಾದ ಮಂಡಿಸಲಾಯಿತು. ಈ ವೇಳೆ ಮಂಡಳಿ ಅರ್ಜಿಗೆ ಅರ್ಜಿದಾರರಿಂದ ತಕರಾರು ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡು ಕಡೆ ವಾದ ಆಲಿಸಿ ನ್ಯಾ.ರವಿ ವಿ.ಹೊಸಮನಿ ಅವರಿದ್ದ ಪೀಠ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ.