ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಕ್ಸೋ ಪ್ರಕರಣದಲ್ಲಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳುಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಈ ಮಧ್ಯೆ, ದೂರುದಾರರಾಗಿರುವ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಮತ್ತೊಂದೆಡೆ, ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಮಾಡಬೇಕೆಂದು ಕೋರಿ ಯಡಿಯೂರಪ್ಪ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.