ಹೊಸದಿಗಂತ ಡಿಜಿಟಲ್ ಡೆಸ್ಕ್:
ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಪಕ್ಷಕ್ಕಾಗಿ ಡಿಕೆಶಿ ಸಾಹೆಬ್ರು ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿಕೆ ಶಿವಕುಮಾರ್ ಅವರ ಪಾತ್ರ ಇದೆ. ಅಲ್ಲದೇ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ 9 ಸ್ಥಾನ ಗೆಲ್ಲಲು ಅವರ ಪಾತ್ರ ಹೆಚ್ಚಿದೆ. ಆದ್ದರಿಂದ ಅವರು ಸಿಎಂ ಆಗೇ ಆಗುತ್ತಾರೆ. ಈ ಡಿಸೆಂಬರ್‌ನಿಂದ ಮುಂದಿನ 5 ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದ್ದಾರೆ.