Monday, October 2, 2023

Latest Posts

ಗ್ಯಾರಂಟಿ ವಿಚಾರದಲ್ಲಿ ಲಂಚ ಕೇಳಿದರೆ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸುತ್ತೇನೆ: ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ವಿಚಾರವಾಗಿ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.

ಕನಕಪುರದ (Kanakapur) ಕಬ್ಬಾಳು ಗ್ರಾಮದಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ.
ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ 2 ಸಾವಿರ ರೂ. ಕೊಡುತ್ತೇವೆ. ಯಾರು ಯಜಮಾನಿ ಎಂದು ನೀವು ತೀರ್ಮಾನ ಮಾಡಿಕೊಳ್ಳಬೇಕು. ಅಲ್ಲದೆ ಈ ಯೋಜನೆಗೆ ಹೆಣ್ಣುಮಕ್ಕಳ ಅಕೌಂಟ್ ನಂಬರನ್ನೇ ಕೊಡಬೇಕು. ಈ ಯೋಜನೆಗಳಿಗೆ ಜೂ.15ರಿಂದ ಜು.15ರ ವರೆಗೆ ಅರ್ಜಿ ಹಾಕಬೇಕು. ಯಾರಿಗೂ ಲಂಚ ಕೊಡಬೇಡಿ ಎಂದಿದ್ದಾರೆ.

ಇದೇ ತಿಂಗಳು 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ರಾಜ್ಯದಲ್ಲಿ ಎಲ್ಲಿಗೆ ಬೇಕಾದರೂ ಓಡಾಡಬಹುದು. ಆದರೆ ಗಂಡಸರು ಟಿಕೆಟ್ ತೆಗೆದುಕೊಂಡು ಓಡಾಡಬೇಕು. ಯಾಕೆಂದರೆ ಕೆಎಸ್‍ಆರ್‍ಟಿಸಿ ನಡಿಯಬೇಕಲ್ಲ ಎಂದು ಹಾಸ್ಯ ಚಟಾಕಿ ಸಿಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!