ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಾಹಿತಿ ಬರಗೂರು ರಾಮಚಂದ್ರಪ್ಪ, ‘ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ, ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಗೆ ನೀಡಿಲ್ಲ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿತ್ತು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.