ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಲಂಡನ್ ದಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಟೆಸ್ಟ್ ವಿಶ್ವಕಪ್ ಫೈನಲ್ ಪಂದ್ಯ ಎರಡು ತಂಡಕ್ಕೂ ಪ್ರತಿಷ್ಠೆಯ ಆಟವಾಗಿದೆ. ಭಾರತ ತಂಡವು ನಾಲ್ವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್‌ನೊಂದಿಗೆ ಕಣಕ್ಕಿಳಿದಿದ್ದು, ರವಿಚಂದ್ರನ್ ಅಶ್ವಿನ್ ಆಡುವ ಹನ್ನೊಂದರ ಬಳಗದಿಂದ ಹೊರಬಿದ್ದಿದ್ದಾರೆ. ಇನ್ನು ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ತಂಡ ಕೂಡಿಕೊಂಡಿದ್ದಾರೆ. ಶ್ರೀಕಾರ್ ಭರತ್, ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಪಂದ್ಯ ಆರಂಭಗೊಂಡಿದ್ದು, ಆಸ್ಟ್ರೇಲಿಯಾ ಮೊದಲ ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದೆ.
ತಂಡ ಹೀಗಿದೆ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆ ಎಸ್ ಭರತ್(ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಪ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರ್ಯಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕೇರಿ(ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ನೇಥನ್ ಲಯನ್, ಸ್ಕಾಟ್ ಬೋಲೆಂಡ್.