ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಪಾಕ್ ನಡುವೆ ಸಂಘರ್ಷ ಹೆಚ್ಚಿರುವ ಬೆನ್ನಿಗೇ ಭಾರತದಲ್ಲಿ ಸುಮಾರು ಎಂಟು ಸಾವಿರ ಎಕ್ಸ್ ಖಾತೆಗಳನ್ನು ನಿರ್ಬಂಧಿಸಲಾಗಿದೆ.
ಈ ಖಾತೆಗಳಿಗೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಕ್ಕೆ ತಕ್ಷಣ ಸ್ಪಂದಿಸಿರುವ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲ ತಾಣ ವೇದಿಕೆ ಎಕ್ಸ್, ಈ ಪ್ರಕ್ರಿಯೆ ಆರಂಭಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಎಕ್ಸ್, ಭಾರತದಲ್ಲಿ ಎಂಟು ಸಾವಿರಕ್ಕೂ ಅಧಿಕ ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರದಿಂದ ಆದೇಶಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ತಡೆ ಹಿಡಿಯುವ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಹೇಳಿದೆ.