ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗವಹಿಸುತ್ತಿಲ್ಲ ಎಂದು ಚೀನಾ ಖಚಿತಪಡಿಸಿದೆ.
ದೆಹಲಿಯಲ್ಲಿ ಜಿ20 ಶೃಂಗಸಭೆ ಸೆಪ್ಟೆಂಬರ್ 9-10ರಂದು ನಡೆಯಲಿದೆ, ಇದರಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇನ್ನು ಚೀನಾ ಪ್ರತಿನಿಧಿಯಾಗಿ ಲಿ ಕಿಯಾಂಗ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿ 20 ಗುಂಪಿನಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಬ್ರಿಟನ್, ಅಮೆರಿಕ ಸೇರಿವೆ. ಜೊತೆಗೆ ಯುರೋಪಿಯನ್ ಯೂನಿಯನ್ (EU) ಅನ್ನು ಸೇರಿಸಲಾಗಿದೆ.
43 ದೇಶಗಳ ಮುಖ್ಯಸ್ಥರು, ಸಂಸ್ಥೆಗಳು ಮತ್ತು ಪ್ರಪಂಚದಾದ್ಯಂತದ ಅವರ ನಿಯೋಗಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. G20 ರಾಷ್ಟ್ರಗಳಲ್ಲದೆ, 9 ಇತರ ದೇಶಗಳ ಮುಖ್ಯಸ್ಥರು ಮತ್ತು 14 ಅಂತಾರಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಶೃಂಗಸಭೆಯಲ್ಲಿ ಅತಿಥಿಗಳಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ.