ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರ್ಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ಎಕ್ಸ್‌ಯುವಿ ನಿಂತಿದ್ದ ಕಾರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಮಸಾಣಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಅಪಘಾತ ಸಂಭವಿಸಿದೆ.ಖಾಖ್ರ ಗ್ರಾಮದ ಬಳಿ ಕಾರ್‌ನ ಟೈರ್ ಪಂಕ್ಚರ್ ಆಗಿದ್ದು, ಅದನ್ನು ಬದಲು ಮಾಡಲು ಕಾರ್ ನಿಲ್ಲಿಸಲಾಗಿತ್ತು.
ಹಿಂಬದಿಯಿಂದ ಎಕ್ಸ್‌ಯುವಿ ವೇಗವಾಗಿ ಬಂದು ಡಿಕ್ಕಿಯಾಗಿದೆ. ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.