ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿಗೆ Y-ಪ್ಲಸ್ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಿರಿಯ ನಟ ಮತ್ತು ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರಿಗೆ ಪಾಕಿಸ್ತಾನದಿಂದ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆಗಳು ಬಂದಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರಕಾರ ಮಂಗಳವಾರ ವೈ-ಪ್ಲಸ್ ಭದ್ರತೆಯನ್ನು ಒದಗಿಸಿದೆ .

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅವರ ಭದ್ರತೆಯನ್ನು ಉನ್ನತೀಕರಿಸಿದೆ.

ಮಿಥುನ್ ಚಕ್ರವರ್ತಿಗೆ ಸಾಮಾಜಿಕ ಮಾಧ್ಯಮದಲ್ಲಿ ಪಾಕಿಸ್ತಾನದ ದರೋಡೆಕೋರನಿಂದ ಬೆದರಿಕೆ ಹಾಕಲಾಗಿದೆ. ಮುಸ್ಲಿಂ ವಿರೋಧಿ ಹೇಳಿಕೆಗಾಗಿ 10-15 ದಿನಗಳಲ್ಲಿ ಕ್ಷಮೆಯಾಚಿಸದಿದ್ದರೆ ಭೀಕರ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಡಾನ್ ಶಹಜಾದ್ ಭಟ್ಟಿ ವೀಡಿಯೊ ಸಂದೇಶದಲ್ಲಿ ಬೆದರಿಕೆ ಹಾಕಿದ್ದಾನೆ .

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!