ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ Y+ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯ ಬಳಿಕ ಈ ಬೆಳವಣಿಗೆ ನಡೆದಿದೆ.
ಪೊಲೀಸ್ ಬೆಂಗಾವಲು ವಾಹನ ಈಗ ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಇರಲಿದೆ. ಎಲ್ಲಾ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಪೊಲೀಸ್ ಸಿಬ್ಬಂದಿ ಅವರ ಜೊತೆಯಲ್ಲಿದ್ದಾರೆ. ಸಲ್ಮಾನ್ ಖಾನ್ ಅವರು ಚಿತ್ರೀಕರಣಕ್ಕಾಗಿ ಭೇಟಿ ನೀಡುವ ಯಾವುದೇ ಪ್ರದೇಶದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಅವರ ಇರುವಿಕೆಯ ಬಗ್ಗೆ ಸೂಚನೆ ನೀಡಲಾಗುತ್ತದೆ. ಪೊಲೀಸ್ ತಂಡವು ಶೂಟಿಂಗ್ ಸ್ಥಳವನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.