Wednesday, August 10, 2022

Latest Posts

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಪ್ರಗತಿ ಸಾಧನೆ ಯಾದಗಿರಿ ಜಿಲ್ಲೆ ಪ್ರಥಮ ಸ್ಥಾನ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..

ಹೊಸದಿಗಂತ ವರದಿ,ಯಾದಗಿರಿ:

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಗತಿ ಸಾದನೆಯಲ್ಲಿ ಯಾದಗಿರಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಹರ್ಷ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಮಾಸಚಾರಣೆ ಮತ್ತು ಮಾತೃವಂದನಾ ಸಪ್ತಾಹ ಕಾರ್ಯಕ್ರಮವನ್ನು ಅವರು ಕಚೇರಿಯ ಸಭಾಂಗಣದಲ್ಲಿ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರಾಷ್ಟೀಯ ಪೋಷಣ್ ಮಾಸಚಾರಣೆ ಇದು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಅಪೌಷ್ಠಿಕತೆ ಇರುವ ಮಕ್ಕಳನ್ನು ಪೋಷಣೆ ಮಾಡುವುದಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ
ಪಂಚಾಯಿತಿ ಮಟ್ಟದಲ್ಲಿ ಮಾಡುತ್ತಿದ್ದು ಇದರಿಂದ ಗ್ರಾಮ ಮಟ್ಟದಲ್ಲಿರುವ ಅಪೌಷ್ಠಿಕತೆ ಇರುವ ಮಕ್ಕಳನ್ನು
ಗುರುತಿಸಿ ಅವರಿಗೆ ಸರಿಯಾದ ಚಿಕಿತ್ಸೆ ನೀಡಿ ಅವರನ್ನು ಪೌಷ್ಠಿಕಯುಕ್ತರನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ಎಲ್ಲರೂ ಸಹಕಾರ ನೀಡಬೇಕಾಗಿದೆ ಎಂದರು.
ಹೆಣ್ಣು ಮಕ್ಕಳು ಹದಿನಾಲ್ಕು ವರ್ಷ ಆದ ನಂತರ ಋತುಮತಿಯಾದಗಿನಿಂದ ಅವಳ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸಬೇಕಾಗುತ್ತದೆ ಅವರಲ್ಲಿ ರಕ್ತ ಹೀನತೆಗೆ ಬಲಿಯಾಗುತ್ತಾರೆ ಅದನ್ನು ತಡೆಗಟ್ಟಬೇಕಾದರೆ ಪೌಷ್ಠಿಕಾ ಆಹಾರದ ಬಗ್ಗೆ ತಿಳಿದುಕೊಳ್ಳುವುದು ಅನಿವಾರ್ಯ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಪೌಷ್ಠಿಕ ಆಹಾರವನ್ನು ಕಡ್ಡಾಯವಾಗಿ ಗರ್ಭಿಣಿಯರು ಸೇವನೆ ಮಾಡಬೇಕು
ಜೊತೆಗೆ ಮಗುವಿನ ಆರೈಕೆ ಮತ್ತು ಮಗುವಿನ ಆಹಾರ ಸೇವನೆ ಮಾಡಿಸುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು ಮತ್ತು ಗರ್ಭಿಣಿಯರು ಕೊರೊನಾ ಲಸಿಕೆ ಹಾಕಿಕೊಳ್ಳಬೇಕು ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶಿಲ್ಪಾಶರ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಪ್ರಭಾಕರ್ ಎಸ್ ಕವಿತಾಳ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ
ಸಂಯೋಜಕ ಯಲ್ಲಪ್ಪ ಕೆ, ಪೋಷಣೆ ಅಭಿಯಾನ್ ಯೋಜನೆಯ ಜಿಲ್ಲಾ ಸಂಯೋಜಕ ಮನಿಷ್, ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ತಾಲೂಕಾ ವೈದ್ಯಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss