Tuesday, August 9, 2022

Latest Posts

ಯಾದಗಿರಿ ಕೋಟೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಹೊಸ ದಿಗಂತ ವರದಿ, ಯಾದಗಿರಿ:

ನಗರದ ಮಧ್ಯಭಾಗದಲ್ಲಿರುವ ಪ್ರಸಿದ್ದ ಕೋಟೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಬುಧವಾರ ಭೇಟಿ ನೀಡಿ ವಿವಿಧ
ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ನಿಗದಿತ ಸಮಯದಲ್ಲಿ ಕೋಟೆ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಮುಗಿಸುವಂತೆ ಹಾಗೂ ಕೋಟೆ ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಕಾರ್ಯ ಯೋಜನೆ ಹಾಕಿಕೊಳ್ಳುವಂತೆ ಸ್ಥಳದಲ್ಲಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಪುರಾತತ್ವ ಸಹಾಯೋಗದೊಂದಿಗೆ ಇನ್ನೂ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಿ ಅಂದಾಜು ಪತ್ರಿಕೆಯೊಂದಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಭೀಮರಾಯ ಕಲ್ಲೂರು ಕಾಮಗಾರಿಯ ಸ್ಥಳದಲ್ಲಿ ಪುರಾತತ್ವ ಸಂರಕ್ಷಣಾ ಸಹಾಯಕರಾದ ಪ್ರೇಮಲತಾ ವಿ., ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ವಿಶ್ವನಾಥ ಹಾಗೂ ಗುತ್ತಿಗೆದಾರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss