ಹೊಸದಿಗಂತ ಡಿಜಿಟಲ್ ಡೆಸ್ಕ್ :
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ 6 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿದಾರರು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 29,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.