ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನರ್ಸಿಂಗ್, ಮೆಡಿಕಲ್ ಆಫೀಸರ್ ಸೇರಿದಂತೆ ಒಟ್ಟು 69 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಜುಲೈ 28ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ವೈದ್ಯಕೀಯ ಪದವಿ, ಬಿಎಸ್ಸಿ ನರ್ಸಿಂಗ್, ಲ್ಯಾಬ್ ಟೆಕ್ನಿಶಿಯನ್ ಹುದ್ದೆಗೆ ಪಿಯುಸಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳನ್ನು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ, ಮೆರಿಟ್ ಪಟ್ಟಿ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹12,679 ರಿಂದ ₹1,30,00 ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಆರ್ಸಿಎಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಯಾದಗಿರಿ- 585202 ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.