ಮೈಸೂರು ಲೋಕಸಭ ಚುನಾವಣಾ ಅಖಾಡಕ್ಕೆ ಯದುವೀರ್‌ ಒಡೆಯರ್‌ ಎಂಟ್ರಿ?

ಹೊಸದಿಂಗತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ತಯಾರಿಗಳು ನಡೆಯುತ್ತಿದ್ದು, ಈಗ ಎಲ್ಲ ರಾಜಕೀಯ ಪಕ್ಷಗಳೂ ತಂತ್ರ ರಣತಂತ್ರಗಳನ್ನು ಹೆಣೆಯುತ್ತಿದೆ.

ಅಭ್ಯರ್ಥಿಯನ್ನು ನಿಲ್ಲಿಸುವ ಮೂಲಕ ಪಕ್ಷಕ್ಕೆ ಭಾರಿ ಮುನ್ನಡೆಯನ್ನು ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಹಲವು ಆಯಾಮಗಳಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈಗ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಬಿಜೆಪಿ ಈಗ ಕಪಿಮುಷ್ಠಿಯಲ್ಲಿದ್ದು, ಶತಾಯಗತಾಯ ಗೆಲುವು ಸಾಧಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ವಿಚಿತ್ರವೆಂದರೆ ಈ ಬಾರಿ ಒಂದೇ ಅಭ್ಯರ್ಥಿಯ ಮೇಲೆ ಎರಡೂ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು ದೃಷ್ಟಿ ನೆಟ್ಟಿದ್ದಾರೆ.

ಬಿಜೆಪಿ ಈಗ ಹೊಸ ಅಭ್ಯರ್ಥಿಯನ್ನು ನಿಲ್ಲಿಸುವ ಸಲುವಾಗಿ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಟಿಕೆಟ್‌ ನೀಡಲು ಮುಂದಾಗಿದೆ. ಕಾಂಗ್ರೆಸ್‌ ಸಹ ಅವರ ಮನವೊಲಿಸಿ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!