spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಖ್ಯಾತ ಹವ್ಯಾಸಿ ಯಕ್ಷಗಾನ ಭಾಗವತ ರಾಮಚಂದ್ರ ಅರ್ಬಿತ್ತಾಯ ವಿಧಿವಶ

- Advertisement -Nitte

ಹೊಸದಿಗಂತ ವರದಿ, ಸುಬ್ರಹ್ಮಣ್ಯ:

ಹವ್ಯಾಸಿ ಯಕ್ಷಗಾನ ಭಾಗವತ ರಾಮಚಂದ್ರ ಅರ್ಬಿತ್ತಾಯ ಇಲ್ಲಿಗೆ ಸಮೀಪದ ಕುಲ್ಕುಂದದಲ್ಲಿ ಶನಿವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕುಲ್ಕುಂದದಲ್ಲಿ ಸ್ಕೂಟರಿನಲ್ಲಿ ಬರುತ್ತಿದ್ದಾಗ ಕಡವೆ ಅಡ್ಡ ಬಂದು, ಸ್ಕೂಟರ್ ಪಲ್ಟಿಯಾಗಿ, ರಾಮಚಂದ್ರರು ಸ್ಥಳದಲ್ಲೇ ಅಸು ನೀಗಿದರೆ, ಸಹೋದರ ರವಿ ಅವರಿಗೂ ಗಾಯಗಳಾಗಿವೆ.
ರಾಮಚಂದ್ರ ಅರ್ಬಿತ್ತಾಯ ಅವರು ಹಿರಿಯ ಯಕ್ಷಗಾನ ಗುರು ಹರಿನಾರಾಯಣ ಬೈಪಾಡಿತ್ತಾಯ ಅವರ ಸೋದರಳಿಯ ಹಾಗೂ ಶಿಷ್ಯರಾಗಿದ್ದರು. ಕುಕ್ಕೆ ಸುಬ್ರಹ್ಮಣ್ಯ-ಸುಳ್ಯ ಪರಿಸರದಲ್ಲಿ ಭಜನಾ ಕಾರ್ಯಕ್ರಮಗಳಲ್ಲಿಯೂ ಸಕ್ರಿಯರಾಗಿದ್ದ ರಾಮಚಂದ್ರ ಅರ್ಬಿತ್ತಾಯರು ತಾಯಿ, ತಂಗಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಕುಮಾರಸ್ವಾಮಿ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಉತ್ತಮ ಕ್ರಿಕೆಟ್, ಬ್ಯಾಡ್ಮಿಂಟನ್ ಆಟಗಾರನೂ ಆಗಿದ್ದ ರಾಮಚಂದ್ರ ಅರ್ಬಿತ್ತಾಯರೇ ಅವರ ಕುಟುಂಬಕ್ಕೆ ಆಸರೆಯಾಗಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss