ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಂಗಳೂರು:
ಯಕ್ಷಗಾನ ಹಿರಿಯ ಕಲಾವಿದ, ಖ್ಯಾತ ವೇಷಧಾರಿ ಸಂಪಾಜೆ ಶೀನಪ್ಪ ರೈ ಅನಾರೋಗ್ಯ ದಿಂದ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಸುಳ್ಯ ತಾಲೂಕಿನ ಸಂಪಾಜೆಯವರಾದ ಶೀನಪ್ಪ ರೈ ಅವರು ಪ್ರಸ್ತುತ ಸುರತ್ಕಲ್ ನ ಕಾಟಿಪಳ್ಳದಲ್ಲಿ ನೆಲೆಸಿದ್ದರು. ರಕ್ತಬೀಜ, ಹಿರಣ್ಯಾಕ್ಷ , ಶಿಶುಪಾಲ ಸಹಿತ ಎದುರು ವೇಷಗಳಿಗೆ ಹೆಸರಾಗಿದ್ದ ಸಂಪಾಜೆ ಅವರ ರಕ್ತಬೀಜನ ಪಾತ್ರ ಅಪಾರ ಜನಪ್ರಿಯತೆ ಗಳಿಸಿತ್ತು. ಕಟೀಲು ಮೇಳದಲ್ಲಿ ಹಲವು ದಶಕಗಳ ತಿರುಗಾಟ ನಡೆಸಿದ ರೈ ಅವರು ಬಳಿಕ ಹೊಸನಗರ, ಎಡನೀರು, ಹನುಮಗಿರಿ ಮೇಳದಲ್ಲಿ ತಿರುಗಾಟ ನಡೆಸಿ ಮೂರು ವರ್ಷದ ಹಿಂದೆ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿದ್ದರು.