SHOCKING NEWS | ಯಕ್ಷಗಾನ ಕ್ಷೇತ್ರದ ಅಪ್ರತಿಮ ಕಲಾವಿದ ಬಂಟ್ವಾಳ ಜಯರಾಮ‌ ಆಚಾರ್ಯ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯ ಗಾರರಾದ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ದೈವಾಧೀನರಾಗಿದ್ದಾರೆ.

ಬಂಟ್ವಾಳ ಕಾಲೇಜ್ ರಸ್ತೆಯಲ್ಲಿ ನಿವಾಸ ಹೊಂದಿರುವ ಅವರು ಪತ್ನಿ ,ಒರ್ವ ಪುತ್ರ,ಒರ್ವಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ತೆರಳಿದ್ದ ಅವರು ಮುಂಜಾನೆ ನಾಲ್ಕು ಗಂಟೆಗೆ ಎದೆನೋವು ಕಾಣಿಸಿಕೊಂಡಿದ್ದು,ತಕ್ಷಣ ಸಹ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲಕಾರಿಯಾ್ದೆ ಕೊನೆಯುಸಿರೆಳೆದಿದ್ದಾರೆ.

ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು.

ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!