ಭ್ರಾಮರೀ ಯಕ್ಷಮಣಿ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ ಆಯ್ಕೆ

ಹೊಸ ದಿಗಂತ ವರದಿ, ಮಂಗಳೂರು:

ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ ಐದನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಅಂಗವಾಗಿ ನೀಡುವ ಭ್ರಾಮರೀ ಯಕ್ಷಮಣಿ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ ಆಯ್ಕೆಯಾಗಿದ್ದಾರೆ.
ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಆ. 27 ಶನಿವಾರದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಭ್ರಾಮರೀ ಯಕ್ಷವೈಭವ ಜರಗಲಿದೆ. ಈ ಸಂದರ್ಭ ಪ್ರಶಸ್ತಿ ಪ್ರದಾನ ನಡೆಯಲಿದೆ. ದಿ. ಬಲಿಪ ಪ್ರಸಾದ ಭಟ್ ಅವರ ಸಂಸ್ಮರಣೆ,ಯಕ್ಷಗಾನ ಪೂರ್ವರಂಗ, ಚೆಂಡೆ ಜುಗಲ್ ಬಂದಿ, ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ದಮಯಂತಿ ಪುನಃ ಸ್ವಯಂವರ, ಮಾಯಾ ತಿಲೋತ್ತಮೆ, ವೀರವರ್ಮ ಕಾಳಗ ಯಕ್ಷಗಾನದ ಪ್ರದರ್ಶನ ಜರಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೂ ಉಚಿತ ಪ್ರವೇಶ ಇರುತ್ತದೆ ಎಂದು ಭ್ರಾಮರೀ ಯಕ್ಷಮಿತ್ರರು ಮಂಗಳೂರು ಅಧ್ಯಕ್ಷ ವಿನಯಕೃಷ್ಣ ಕುರ್ನಾಡ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!