ಯಲಹಂಕ ಗ್ಯಾಸ್ ವಿದ್ಯುತ್ ಸ್ಥಾವರ ಬಂದ್: ರಾಜ್ಯದ ವಿದ್ಯುತ್ ಪೂರೈಕೆಗೆ ಸಮಸ್ಯೆ ಇಲ್ಲ ಎಂದ ಇಂಧನ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೇಸಿಗೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್ ಬಳಕೆ ಗಣನೀಯವಾಗಿ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಯಲಹಂಕದಲ್ಲಿರುವ ಗ್ಯಾಸ್ ಆಧಾರಿತ ವಿದ್ಯುತ್ ಸ್ಥಾವರ ತಾತ್ಕಾಲಿಕವಾಗಿ ಬಂದ್ ಆಗಿರುವುದರಿಂದ ವಿದ್ಯುತ್ ಕೊರತೆ ಉಂಟಾಗಬಹುದೇ ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ಇದರಿಂದ ರಾಜ್ಯದ ವಿದ್ಯುತ್ ಪೂರೈಕೆಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಗುರುವಾರ ಬೆಳಿಗ್ಗೆ 10.30ರವರೆಗೆ ರಾಜ್ಯದಲ್ಲಿ ಸುಮಾರು 18,800 ಮೆಗಾವಾಟ್ ವಿದ್ಯುತ್ ಬೇಡಿಕೆ ದಾಖಲಾಗಿದ್ದು, ಇದು ಕಳೆದ ಎರಡು ವರ್ಷಗಳಲ್ಲಿ ಅತಿ ಹೆಚ್ಚು ಬೇಡಿಕೆಯಾಗಿದೆ. … Continue reading ಯಲಹಂಕ ಗ್ಯಾಸ್ ವಿದ್ಯುತ್ ಸ್ಥಾವರ ಬಂದ್: ರಾಜ್ಯದ ವಿದ್ಯುತ್ ಪೂರೈಕೆಗೆ ಸಮಸ್ಯೆ ಇಲ್ಲ ಎಂದ ಇಂಧನ ಇಲಾಖೆ