ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ನಟಿ ನಯನತಾರಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ದಾದಾಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲಂ ಫೆಸ್ಟಿವಲ್‌ ಅವಾರ್ಡ್ಸ್‌’ನಲ್ಲಿ ನಟಿ ನಯನತಾರಾಗೆ ‘ಬೆಸ್ಟ್ ವರ್ಸಟೈಲ್ ನಟಿ ‘ ಪ್ರಶಸ್ತಿ ನೀಡಿ ಗೌರವಿಸಲಗಿದೆ.

ವಿಭಿನ್ನ ಪಾತ್ರಗಳ ಮೂಲಕ ಸೌತ್ ಹಾಗೂ ನಾರ್ತ್‌ ಚಿತ್ರರಂಗಗಳಲ್ಲಿ ಬಹುಬೇಡಿಕೆಯಲ್ಲಿರುವ ನಟಿ ನಯನತಾರಾ ‘ಅತ್ಯುತ್ತಮ ಬಹುಮಖ ಪ್ರತಿಭೆಯುಳ್ಳ ನಟಿ’ ಪ್ರಶಸ್ತಿ ಗಳಿಸಿದ್ದಾರೆ.

ಇತ್ತೀಚಿಗಷ್ಟೇ ಬಾಲಿವುಡ್‌ ‘ಜವಾನ್’ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರೊಂದಿಗೆ ನಟಿಸಿ ಬಾಲಿವುಡ್‌ ದಿಗ್ಗಜರನ್ನೂ ಬೆರಗಾಗಿಸಿದ್ದರು .

ಇನ್ನು ‘ಅನಿಮಲ್’ ಚಿತ್ರಕ್ಕಾಗಿ ಸಂದೀಪ್ ರೆಡ್ಡಿ ವಂಗಾ ಅವರು ಬೆಸ್ಟ್ ಡೈರೆಕ್ಟರ್’ ಪ್ರಶಸ್ತಿ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!