spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, January 17, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯರಗೋಳ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

- Advertisement -Nitte

ಹೊಸ ದಿಗಂತ ವರದಿ, ಯಾದಗಿರಿ:

ಕೋವಿಡ್ -19 ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಜಿಲ್ಲೆಯ ಗಡಿ ಭಾಗಗಳಲ್ಲಿ 10 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ತಿಳಿಸಿದರು.

ಯಾದಗಿರಿ ತಾಲೂಕಿನ ಯರಗೋಳ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.

ಯಾದಗಿರಿ ತಾಲೂಕಿನ ಯರಗೋಳ, ಕಡೆಚೂರು .ಸುರಪುರ ತಾಲೂಕಿನ ಮಲ್ಲಾ ಬಿ, ತಿಂಥಣಿ. ಶಹಾಪುರ ತಾಲೂಕಿನ ಮುಡಬೋಳ. ಗುರುಮಿಠಕಲ್ ತಾಲೂಕಿನ ಗುರುಮಿಠಕಲ್ ಮತ್ತು ಕುಂಠಿಮರಿ , ಪುಟಪಾಕ್. ಹುಣಸಗಿ ತಾಲೂಕಿನ ನಾರಾಯಣಪುರ , ಮಾಳನೂರ ಗಳಲ್ಲಿ ಜಿಲ್ಲೆಗೆ ಹೊರರಾಜ್ಯ , ಬರುವ ಪ್ರಯಾಣಿಕರಿಗೆ ಪರಿಶೀಲಿಸಲು ಚೆಕ್ ಪೋಸ್ಟ್ ಗಳಲ್ಲಿ ಶೆಡ್ ಗಳನ್ನು ( ಕಂಟೇನರ್) ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯರಗೋಳ ಚೆಕ್ ಪೋಸ್ಟ್ ನಲ್ಲಿ ನಿರ್ಮಿಸಲಾದ ಶೆಡ್ ನ್ನು (ಕಂಟೇನರ್) ಪರಿಶೀಲಿಸಿ, ಪ್ರತಿಯೊಬ್ಬ ಪ್ರಯಾಣಿಕರನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡಿ ಪರಿಶೀಲಿಸಬೇಕು ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ, ನಿರ್ಮೀತಿ ಕೇಂದ್ರದ ಅಧಿಕಾರಿ ಕಿರಣ್ ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss