ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶ್ ಪ್ರಸ್ತುತ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅವರು ಒಪ್ಪಿಕೊಂಡಿರುವ ‘ರಾಮಾಯಣ’ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಡಿಸೆಂಬರ್‌ನಲ್ಲಿ ಯಶ್ ʼರಾಮಾಯಣ’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.
ಆ.8ಕ್ಕೆ ಟಾಕ್ಸಿಕ್ ಸಿನಿಮಾಗೆ ಚಿತ್ರಕ್ಕೆ ನೀಡಲಾಗಿತ್ತು. ಅಂದಿನಿಂದ ಈ ಪ್ರಾಜೆಕ್ಟ್‌ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಇನ್ನೂ ಹಲವು ಹಂತದಲ್ಲಿ ಶೂಟಿಂಗ್ ನಡೆಯಲಿದೆ. ಆದರೆ ರಣ್‌ಬೀರ್ ಕಪೂರ್ ‘ರಾಮಾಯಣ’ ಚಿತ್ರದಲ್ಲಿ ಯಶ್ ‘ರಾವಣ’ನಾಗಿ ಬರೋಕೆ ಮುಹೂರ್ತ ಫಿಕ್ಸ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ಜೊತೆಗೆಯೇ ಈ ಚಿತ್ರಕ್ಕೂ ಅವರು ಸಾಥ್ ನೀಡಲಿದ್ದಾರೆ.