Saturday, December 6, 2025

ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದ ಯಶಸ್ವಿ ಜೈಸ್ವಾಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ.

ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಜೈಸ್ವಾಲ್, ಇದೀಗ ಸರಣಿ ನಿರ್ಧಾರಕ ಪಂದ್ಯದಲ್ಲಿ ಶತಕ ಬಾರಿಸಿ ಗಮನಸೆಳೆದರು.

ಈಗಾಗಲೇ ಟಿ20 ಮತ್ತು ಟೆಸ್ಟ್ ಕ್ರಿಕೆಟ್​​ನಲ್ಲಿ ಭಾರತ ತಂಡದ ಪರ ಜೈಸ್ವಾಲ್ ಶತಕ ಗಳಿಸಿದ್ದರು. ಈಗ ಏಕದಿನ ಕ್ರಿಕೆಟ್​​ನಲ್ಲಿ ಜೈಸ್ವಾಲ್ ಚೊಚ್ಚಲ ಶತಕ ಬಾರಿಸುವ ಮೂಲಕ ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಭಾರತದ ಪರ ಕೇವಲ ನಾಲ್ಕು ಏಕದಿನ ಪಂದ್ಯಗಳನ್ನು ಜೈಸ್ವಾಲ್ ಆಡಿದ್ದಾರೆ.

error: Content is protected !!