ಹೊಸದಿಗಂತ ಡಿಜಿಟಲ್ ಡೆಸ್ಕ್;
ಇಂಗ್ಲೆಂಡ್ ವಿರುದ್ದದ ಐದನೇ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿದ್ದಾರೆ.
ಕೆನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಜೈಸ್ವಾಲ್, ಇಂಗ್ಲೆಂಡ್ ವಿರುದ್ದ ತಮ್ಮ ನಾಲ್ಕನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿದ್ದಾರೆ. ಅಲ್ಲದೆ ಇದು ಯಶಸ್ವಿ ಜೈಸ್ವಾಲ್ ಅವರ ಟೆಸ್ಟ್ ವೃತ್ತಿ ಬದುಕಿನ ಆರನೇ ಶತಕವಾಗಿದೆ.
ಪ್ರಥಮ ಇನಿಂಗ್ಸ್‌ನಲ್ಲಿ ಹೀನಾಯವಾಗಿ ವಿಕೆಟ್ ಒಪ್ಪಿಸಿ ಟೀಕೆಗಳಿಗೆ ಗುರಿಯಾಗಿದ್ದ ಜೈಸ್ವಾಲ್, ದ್ವಿತೀಯ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಶನಿವಾರ ಬೆಳಿಗ್ಗೆ 51 ರನ್‌ಗಳಿಂದ ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರಿಸಿದ ಯಶಸ್ವಿ ಜೈಸ್ವಾಲ್, ನೈಟ್ ವಾಚ್‌ಮ್ಯಾನ್ ಆಕಾಶ್ ದೀಪ್ ಅವರ ಜೊತೆ ಸೇರಿ 107 ರನ್‌ಗಳ ನಿರ್ಣಾಯಕ ಜೊತೆಯಾಟವನ್ನು ಆಡಿದ್ದರು. 58 ಓವರ್‌ಗಳ ವೇಳೆಗೆ 146 ಎಸೆತಗಳಲ್ಲಿ ಅಜೇಯ 115 ರನ್‌ಗಳನ್ನು ಗಳಿಸಿ ಬ್ಯಾಟಿಂಗ್ ಮುಂದುವರಿಸಿದ್ದಾರೆ.