Monday, October 2, 2023

Latest Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ಧಾರವಾಹಿಯ ನಟಿ ಯಶಸ್ವಿನಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಮಲಿ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ನಟಿ ಯಶಸ್ವಿನಿ ರವೀಂದ್ರ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ನಟಿ ಯಶಸ್ವಿನಿ ರವೀಂದ್ರ ಬಹುಕಾಲದ ಗೆಳೆಯ ಚೇತನ್ ರಾಜ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರು,
ಆಪ್ತರ ಸಮ್ಮುಖದಲ್ಲಿ ನಟಿ ಮದುವೆಯಾಗಿದ್ದು ಯಶಸ್ವಿನಿ ಹಾಗೂ ಚೇತನ್ ಜೋಡಿಗೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ನಟಿ ಯಶಸ್ವಿನಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದಾರೆ. ಆಪ್ತರ ಸಮ್ಮುಖದಲ್ಲಿ ಯಶಸ್ವಿನಿ- ಚೇತನ್ ರಾಜ್
ಸಿಂಪಲ್ ಆಗಿ ಮದುವೆಯಾಗಿದ್ದಾರೆ.

ಕಮಲಿ ಧಾರವಾಹಿಯಲ್ಲಿ ನಟನ ಸಹೋದರಿಯಾಗಿ ರಚನ ಹೆಸರಿನಿಂದ ಖ್ಯಾತಿ ಗಳಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!