ಅಕ್ಟೋಬರ್‌ನಲ್ಲಿ ಯಶಸ್ವಿನಿ ಯೋಜನೆ ಮರುಜಾರಿ: ಸಹಕಾರ ಸಚಿವ ಸೋಮಶೇಖರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಶಸ್ವಿನಿ ಯೋಜನೆ ಜಾರಿಯಾಗಿರಲಿಲ್ಲ. ಸುಮಾರು ೨-೩ ವರ್ಷಗಳ ನಂತರ ಮತ್ತೆ ಚಾಲನೆ ನೀಡುತ್ತಿದ್ದೇವೆ. ಸುಮಾರು ಸಹಕಾರಿಗಳು ಹಲವು ವರ್ಷಗಳಿಂದ ಯಶಸ್ವಿನಿ ಯೋಜನೆ ಮತ್ತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಅಕ್ಟೋಬರ್ ೨ರಂದು ಗಾಂಧಿ ಜಯಂತಿಯAದು ಮರು ಜಾರಿಮಾಡಲು ಈಗಾಗಲೇ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಯಶಸ್ವಿನಿ ಜಾರಿ ಮಾಡಿರಲಿಲ್ಲ.ಜಾರಿ ಮಾಡಬೇಕು ಎಂಬುದಾಗಿ ರೈತರ ಮತ್ತು ಸಹಕಾರಿಗಳ ಒತ್ತಾಸೆ ಇತ್ತು.ಹಾಗಾಗಿ ಅಕ್ಟೋಬರ್ ನಿಂದ ರಾಜ್ಯಾದ್ಯಂತ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು.ಅ.೨ರಂದು ಗಾಂಧಿ ಜಯಂತಿಯAದು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.ಯಶಸ್ವಿನಿಗೆ ಅ.೨ರ ನಂತರ ಸದಸ್ಯರಾಗಬಹುದು.ಈ ಹಿಂದೆ ಸದಸ್ಯರಾಗಿದ್ದವರು ಕೂಡಾ ಮತ್ತೆ ಸದಸ್ಯತ್ವವನ್ನು ಪಡೆದುಕೊಳ್ಳಬೇಕು ಎಂದರು.
ಪ್ರತ್ಯೇಕ ಬ್ಯಾಂಕ್;
ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ಸರಕಾರ ಯೋಜನೆ ರೂಪಿಸುತ್ತಿದೆ. ಈಗಾಗಲೇ ೨೬ ಲಕ್ಷ ರೈತರು ಹಾಲನ್ನು ಹಾಕುತ್ತಿದ್ದಾರೆ.ಅವರಿಗೆ ಪ್ರತ್ಯೇಖವಾಗಿ ನಂದಿನಿ ಕ್ಷೀರಾ ಸಮೃದ್ಧಿ ಬ್ಯಾಂಕ್ ಮಾಡಲು ಈಗಾಗಲೇ ಅಮಿತ್ ಷಾ ಲೋಕಾರ್ಪಣೆ ಮಾಡಿದ್ದಾರೆ. ರಿಸರ್ವ್ ಬ್ಯಾಂಕ್‌ನಿAದಲೂ ಅನುಮತಿ ಪಡೆಯಲಾಗಿದ್ದು, ಅವರಿಗೆ ಪೂರಕ ಮಾಹಿತಿ, ದಾಖಲೆ ನೀಡಲಾಗಿದೆ. ಸುಮಾರು ವರ್ಷದಿಂದ ಹೊಸತಾಗಿ ಯಾರಿಗೂ ಕೋ-ಆಪರೇಟಿವ್ ಬ್ಯಾಂಕ್‌ಗೆ ಅವಕಾಶ ನೀಡಿಲ್ಲ. ಅದಕ್ಕಾಗಿ ಇದೀಗ ಅವಕಾಶ ನೀಡಲಾಗುತ್ತಿದೆ.ಮುಖ್ಯಮಂತ್ರಿಗಳ ಕನಸಿನ ಕೂಸಾದ ಈ ಬ್ಯಾಂಕ್ ಸಹಕಾರ ಕ್ಷೇತ್ರದ ಬ್ಯಾಂಕ್ ಆಗಿ ಜನತೆಗೆ ಸಹಕಾರ ನೀಡಲಿದೆ. ನಬಾರ್ಡ್ನಿಂದ ಇದಕ್ಕೆ ಬೇಕಾದ ಯೋಜನೆಗಳನ್ನು ಪಡೆಯಲು ಪ್ರಯತ್ನಿಸಲಾಗುವುದು. ಇದನ್ನೂ ಅಕ್ಟೋಬರ್‌ನಲ್ಲಿ ಆರಂಭಿಸಲಾಗುವುದು ಎಂದು ಸೋಮಶೇಖರ್ ಹೇಳಿದರು.
ಬೆಳೆಸಾಲ ನೀಡಲು ಕೃಷಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ ಕೂಡಲೇ ಹಣ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು.ಅತಿವೃಷ್ಠಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಮತ್ತು ಮನೆ ಇತ್ಯಾದಿಗಳು ಹಾನಿಗೊಳಗಾದ ಕೃಷಿಕರಿಗೆ ತಕ್ಷಣ ಪರಿಹಾರ ವಿತರಿಸಲಾಗುತ್ತಿದೆ. ರೂ.೫ಲಕ್ಷ, ೩ ಲಕ್ಷ,೧ಲಕ್ಷ ಹಾಗೂ ೫೦ ಸಾವಿರದ ತನಕ ಜಿಲ್ಲಾಧಿಕಾರಿಗಳವರದಿಯನ್ನು ಆದರಿಸಿ ತಕ್ಷಣ ಪರಿಹಾರ ವಿತರಿಸಲಾಗುತ್ತದೆ.
ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ.ವಿ.ಭಟ್, ಮಾಜಿ ಸದಸ್ಯ ಕಿಶೋರ್ ಶಿರಾಡಿ, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಠಾಚಾರ ವಿಭಾಗದ ಹರೀಶ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!