Tuesday, July 5, 2022

Latest Posts

ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ? ಟಿಎಂಸಿಗೆ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈಗಾಗಲೇ ತೃಣಮೂಲ ಕಾಂಗ್ರೆಸ್‌ಗೆ ರಾಜೀನಾಮೆಯನ್ನೂ ಘೋಷಿಸಿರುವ ಯಶವಂತ್‌ ಸಿನ್ಹಾ ಈ ವಿಷಯವನ್ನು ಸ್ವತಃ ತಾವೇ ತಮ್ಮ ಟ್ವಿಟ್ಟರ್ ವೇದಿಕೆಯಲ್ಲಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ʻರಾಷ್ಟ್ರೀಯ ಹಿತಾಸಕ್ತಿ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಕೆಲಸ ಮಾಡಲು ಪಕ್ಷದಿಂದ ಹೊರಬರುವ ಸಮಯ ಬಂದಿದೆ ಎಂದು ಬರೆದುಕೊಂಡಿದ್ದಾರೆʼ ತಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಯಶವಂತ್ ಸಿನ್ಹಾ ಧನ್ಯವಾದ ತಿಳಿಸಿದ್ದಾರೆ.

 

ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ಅಭ್ಯರ್ಥಿಯನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಲ್ಲಿ ವಿರೋಧ ಪಕ್ಷಗಳ ಕಾರ್ಯತಂತ್ರ ಮುಂದುವರಿದಿದೆ. ಈ ನಿಟ್ಟಿನಲ್ಲಿ ಮಂಗಳವಾರ ಶರದ್ ಪವಾರ್ ನಿವಾಸದಲ್ಲಿ ವಿಪಕ್ಷ ನಾಯಕರು ಸಭೆ ನಡೆಸಿದ್ದಾರೆ. ಶರದ್ ಪವಾರ್ ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ಪ್ರಪುಲ್ ಪಟೇಲ್, ಜೈರಾಮ್ ರಮೇಶ್, ಸೀತಾರಾಂ ಏಚೂರಿ, ಡಿ. ರಾಜರು ಭಾಗಿಯಾಗಿದ್ದರು. ಈ ಚರ್ಚೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರ ಹೆಸರು ಪ್ರಸ್ತಾಪವಾಗಿದೆಯಂತೆ. ಆದರೆ, ಮಧ್ಯಾಹ್ನ 2.30ಕ್ಕೆ 17 ವಿರೋಧ ಪಕ್ಷಗಳ ನಾಯಕರು ಸೇರುವ ಸಭೆಯಲ್ಲಿ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss