ಕಲಬುರಗಿಯ ನೂತನ ಜಿಲ್ಲಾಧಿಕಾರಿಯಾಗಿ ಯಶವಂತ‌ ವಿ. ಗುರುಕರ್ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಕಲಬುರಗಿ:

ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯಶವಂತ್ ವಿ. ಗುರುಕರ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಯಶವಂತ ವಿ. ಗುರುಕರ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ಸೋಮವಾರವಷ್ಟೆ ಸರ್ಕಾರ ಆದೇಶ ಹೊರಡಿಸಿತ್ತು.
ಬಿ.ಟೆಕ್ ಮತ್ತು ಎಂ.ಬಿ.ಎ ಪಧವಿಧರರಾಗಿರುವ ಯಶವಂತ ವಿ. ಗುರುಕರ್ ಅವರು ಮೂಲತ ಬೆಂಗಳೂರಿನವರಾಗಿದ್ದು, 2010ನೇ ಬ್ಯಾಚಿನ್ ಐ.ಎ.ಎಸ್. ಅಧಿಕಾರಿಯಾಗಿದ್ದಾರೆ. ಈ ಹಿಂದೆ ಬಾಗಲಕೋಟೆಯಲ್ಲಿ ಸಹಾಯಕ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ನಿರ್ಗಮಿತ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸರ್ಕಾರ ವರ್ಗಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!