ತಿಹಾರ್ ಜೈಲಿನಲ್ಲಿ ಸತ್ಯಾಗ್ರಹ ನಡೆಸುತ್ತಿದ್ದ ಯಾಸಿನ್ ಮಲಿಕ್‌ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತವಾದಿ ನಾಯಕ, ಲಿಬರೇಶನ್ ಫ್ರಂಟ್ ಮುಖ್ಯಸ್ಥ ಯಾಸಿನ್ ಮಲಿಕ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆರ್​ಎಂಎಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಅವರನ್ನು ಅಲ್ಲಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಲಿಕ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇತ್ತೀಚೆಗೆ ತಮ್ಮ ವಿರುದ್ಧದ ಪ್ರಕರಣಗಳ ವಿಚಾರಣೆ ಸರಿಯಾಗಿ ನಡೆಯುತ್ತಿಲ್ಲವೆಂದು ಆರೋಪಿಸಿದ್ದ ಈ ಪ್ರತ್ಯೇಕತಾವಾದಿ ನಾಯಕ ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!