Saturday, December 20, 2025

ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹದೇವಪುರದಲ್ಲಿ ವೋಟ್ ಚೋರಿ ಆಗಿದೆ ಎಂದು ಆರೋಪ ಮಾಡಲಾಗಿದ್ದು ಆಳಂದ ಕ್ಷೇತ್ರದ ವೋಟ್ ಚೋರಿ ಕುರಿತಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ಮಧ್ಯೆ ರಾಜ್ಯದಲ್ಲಿ ಕಾಂಗ್ರೆಸ್ ‘ವೋಟ್‌ ಚೋರ್‌ ಗದ್ದಿ ಛೋಡೊ’ ಅಭಿಯಾನದ ಸಹಿ ಸಂಗ್ರಹ ಸಹ ನಡೆಸುತ್ತಿದೆ.

ಬೆಂಗಳೂರಿನಲ್ಲಿ ನಡೆದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಒಬ್ಬ ರಾಜಕೀಯ ಫುಡಾರಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದರೂ ಚುನಾವಣಾ ಆಯುಕ್ತರು ಮಾತ್ರ ರಾಹುಲ್ ಗಾಂಧಿಯ ತೇಜೋವಧೆ ಮಾಡುತ್ತಿದ್ದಾರೆ. ಅವರು ರಾಜಕೀಯ ಪುಢಾರಿ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

error: Content is protected !!