ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋವೊಂದು ವೈರಲ್ ಆಗಿದ್ದು, ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮೊಬೈಲ್‌ನಲ್ಲಿ ಮಾತನಾಡುವ ವೇಳೆ ಯತೀಂದ್ರ ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟು ಮಾತ್ರ ಮಾಡಿ ಎಂದು ಹೇಳಿದ್ದಾರೆ. ಯತೀಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡ್ತಿದ್ದಾರೆ, ತಂದೆಬೆನ್ನ ಹಿಂದೆ ಆಡಳಿತ ಮಾಡ್ತಿದ್ದಾರೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.
ಮೈಸೂರಿನ ಕೀಳನಪುರ ಗ್ರಾಮದ ಜನಸಂಪರ್ಕ ಸಭೆಯಲ್ಲಿ ಮಾತನಾಡುವ ವೇಳೆ ಅಪ್ಪ ಹೇಳಿ ಎಂದು ಯತೀಂದ್ರ ಫೋನ್‌ನಲ್ಲಿ ಮಾತು ಆರಂಭಿಸ್ತಾರೆ. ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿದ್ದು, ಬೇರೆ ಲಿಸ್ಟ್ ಬೇಡ ನಾನು ಕೊಟ್ಟಿರೋದೇ ಐದು ಎಂದು ರೇಗಿದ್ದು, ಮಹದೇವರಿಗೆ ಫೋನ್ ಕೊಡಿ ಎಂದಿದ್ದಾರೆ.
ನಂತರ ಮಹದೇವ ಅವರ ಬಳಿ ಮಾತನಾಡಿ ಯಾಕೆ ಯಾವ್ಯಾವುದೋ ಕೊಡ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಬೇರೆ ಮಾತು ಬೇಡ ನಾನು ಕೊಟ್ಟಿರೋದನ್ನು ಮಾಡಿ ಎಂದು ಹೇಳಿದ್ದಾರೆ.
ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ… pic.twitter.com/T1366ek2iS
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 16, 2023