Monday, October 3, 2022

Latest Posts

ಮುರುಘಾ ಶ್ರೀಗಳನ್ನು ಪೀಠತ್ಯಾಗ ಮಾಡಲು ನಿರ್ದೇಶಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಯತ್ನಾಳ್ ಪತ್ರ

ಹೊಸದಿಗಂತ ವರದಿ, ವಿಜಯಪುರ:

ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಈ ಬಗ್ಗೆ, ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವ ಅವರು, ಮುರುಘಾ ಮಠಕ್ಕೆ ತಾತ್ಕಾಲಿಕ ಮೇಲುಸ್ತುವಾರಿ ಸಮಿತಿ ರಚನೆ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲು ಮನವಿ ಮಾಡಿದ್ದು, ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.

ಮಠದ ದೈನದಿಂದ ಆಡಳಿತ ಸುಗಮವಾಗಿ ನಡೆಯುವಂತೆ ಸಮಿತಿ ಮಾಡಬೇಕು. ಚಿತ್ರದುರ್ಗದ ಬೃಹನ್ಮಠ ವಿರಕ್ತ‌ ಪರಂಪರೆಯ ಶೂನ್ಯಪೀಠದ ಅಗ್ರಗಣ್ಯ ಮಠವಾಗಿದೆ. ಮುರುಘಾ ಶ್ರೀಗಳ ಕಾರಣದಿಂದಾಗಿ ವೀರಶೈವ ಲಿಂಗಾಯತ ಸಮಾಜಕ್ಕೆ ಅವಮಾನಕರವಾಗಿದೆ. ಪ್ರಕರಣ ಕೋರ್ಟ್ ನಲ್ಲಿ ಇರೋದರಿಂದ ಸ್ವಾಮೀಜಿಗಳು ಪೀಠ ತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸಿ ಕಾನೂನು ಬದ್ಧ ಸಮಿತಿ ಮಾಡಬೇಕು ಎಂದು ವಿನಂತಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!