Wednesday, July 6, 2022

Latest Posts

ಶಾಮನೂರ ಶಿವಶಂಕರಪ್ಪ ವಿರುದ್ಧ ಶಾಸಕ ಯತ್ನಾಳ ಆಕ್ರೋಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ವಿಜಯಪುರ:

ಸಿಎಂ ಯಡಿಯೂರಪ್ಪ ಅವರಿಗೆ ಶಾಮನೂರು ಶಿವಶಂಕರಪ್ಪ ಅವರಿಂದ ಬೆಂಬಲ ವಿಚಾರ ಕುರಿತು, ವೀರಶೈವ ಮಹಾಸಭಾ ಹಾಗೂ ಶಾಮನೂರು ಶಿವಶಂಕರಪ್ಪ‌ ವಿರುದ್ಧ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಬದಲಾವಣೆ ಮಾಡಿದರೆ ಬೇರೆ ಲಿಂಗಾಯತರಿಗೆ ಕೊಡಬಹುದು ಎಂದು ಹೇಳಬೇಕಿತ್ತು. ಅದು ಬಿಟ್ಟು ಯಡಿಯೂರಪ್ಪ ಬದಲಾವಣೆ ಮಾಡಬೇಡಿ ಅಂದರೆ ಏನು ಅರ್ಥ ? ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ನಾಯಕರು ಈ ರೀತಿ ತಂತ್ರ ಮಾಡಿದ್ದಾರೆ ಎಂದು ದೂರಿದರು.

ಯಡಿಯೂರಪ್ಪ ಪರವಾಗಿ ಶಾಮನೂರ ಶಿವಶಂಕರಪ್ಪ ಮಾತನಾಡಿ ಉಪಯೋಗವಿಲ್ಲ. ವೀರಶೈವ ಮಹಾಸಭಾ ಎಲ್ಲ ಲಿಂಗಾಯತರ ಪರವಾಗಿ ಕೆಲಸ ಮಾಡಬೇಕು. ಕೇವಲ ಯಡಿಯೂರಪ್ಪ ಪರವಾಗಿ ಮಾತನಾಡಿದರೆ ಪ್ರಯೋಜನವಿಲ್ಲ ಎಂದರು.

ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ವಿಚಾರ ಬಿಜೆಪಿ ಹೈಕಮಾಂಡ್ ಗೆ ಬಿಟ್ಟದು. ಕಾಂಗ್ರೆಸ್ ನಾಯಕರು ಈ ವಿಚಾರದ ಬದಲು, ತಮ್ಮ ಪಕ್ಷದ ನಾಯಕರ ಬಗ್ಗೆ ಯೋಚನೆ ಮಾಡಲಿ ಎಂದು ಹರಿಹಾಯ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss