ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಿಂಗಾಯತ ಸಮುದಾಯದ ಸಭೆಗಳ ವಿಚಾರದಲ್ಲಿ ವಿಜಯೇಂದ್ರ ಮತ್ತು ಯತ್ನಾಳ್ ಬಣಗಳ ನಡುವೆ ಭಿನ್ನಾಭಿಪ್ರಾಯಗಳು ಉಲ್ಬಣಗೊಳ್ಳುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿ, ಯಾವುದೇ ಸಭೆಗಳನ್ನು ನಡೆಸದಂತೆ ಎರಡೂ ಬಣಗಳಿಗೂ ಎಚ್ಚರಿಕೆ ನೀಡಿದೆ.
ಈ ಹಿಂದೆ ಕೂಡಲ ಸಂಗಮದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶ ನಡೆಸುವ ಮೂಲಕ ವಿಜಯೇಂದ್ರ ಮತ್ತು ಯಡಿಯೂರಪ್ಪ ಬಣಕ್ಕೆ ತಿರುಗೇಟು ನೀಡಲು ಯತ್ನಾಳ್ ಬಣ ಮುಂದಾಗಿತ್ತು. ಆದರೆ ಹೈಕಮಾಂಡ್ ಮಧ್ಯಪ್ರವೇಶದ ನಂತರ ಯತ್ನಾಳ್ ಬಣ ಸದ್ಯಕ್ಕೆ ಸುಮ್ಮನಿದೆ.
ಇತ್ತೀಚೆಗೆ ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಅನೇಕ ಲಿಂಗಾಯತ ನಾಯಕರು ಸೇರಿ ಬಿವೈ ವಿಜಯೇಂದ್ರ ಪರವಾಗಿ ಲಿಂಗಾಯತ ನಾಯಕರ ಸಭೆ ನಡೆಸಿ ಯತ್ನಾಳ್ ಬಣಕ್ಕೆ ಟಾಂಗ್ ನೀಡಿದ್ದರು. ಆದರೆ ನಿನ್ನೆ ಯತ್ನಾಳ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಲಿಂಗಾಯತ ಮುಖಂಡರ ಸಭೆ ನಡೆಸಿದ್ದಾರೆ. ಆ ಮೂಲಕ ವಿಜಯೇಂದ್ರ ಪರವಾಗಿರುವ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.