ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರೈತರ ಪರವಾಗಿ ವಕ್ಫ್ ಮಂಡಳಿಯನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಸದನದ ಜಂಟಿ ಸಮಿತಿ ಆಗಮಿಸಿದೆ ಎಂದು ತಿಳಿಸಿದ್ದಾರೆ.
ಶಾಸಕರು ರೈತರ ಸಮಸ್ಯೆಗಳನ್ನು ಸದನ ಸಮಿತಿಗೆ ವಿವರಿಸಲಿದ್ದು, ಮುಂದಿನ ಸಂಸತ್ ಅಧಿವೇಶನದಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮುನ್ನ ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸಲಾಗುವುದು ಎಂದು ಹೇಳಿದ್ದಾರೆ.