ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯವಾಗಬೇಕು ಎಂದು ಪ್ರತಿಪಾದಿಸಿರುವ ಯತ್ನಾಳ್, ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌ಗೆ ಅವಕಾಶ ನೀಡದಿರುವಂತೆ ಪತ್ರದಲ್ಲಿ ಸವಿವರವಾಗಿ ಮನವಿ ಮಾಡಿದ್ದಾರೆ. ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ನಿಷೇಧಿಸುವ ತೀರ್ಮಾನವನ್ನು ಸರ್ಕಾರ ಕೈಗೊಂಡಿತ್ತು. ಈ ನಿರ್ಣಯದ ಬೆನ್ನಲ್ಲೇ ಶಾಸಕ ಯತ್ನಾಳ್ ಅವರು ಈ ಪತ್ರ ಬರೆದಿದ್ದಾರೆ.