spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯತ್ನಾಳ್ ಹೇಳಿಕೆ ವೈಯಕ್ತಿಕ: ಸಾರಿಗೆ ಸಚಿವ ಲಕ್ಷ್ಮಣ ಸವದಿ

- Advertisement -Nitte

ಹೊಸದಿಗಂತ ವರದಿ, ಕಲಬುರಗಿ:

ರಾಜ್ಯ ಸರ್ಕಾರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಹಲವರ ಹೇಳಿಕೆಗಳು ಅವರ ವೈಯಕ್ತಿಕ ಹೇಳಿಕೆಗಳಾಗಿವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಲ್ಲಿ ಸಣ್ಣ ಪುಟ್ಟ ಗೊಂದಲಗಳಿವೆ. ಪಕ್ಷದ ವರಿಷ್ಠರು ಅದನ್ನು ಬಗೆಹರಸುತ್ತಾರೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಮನೆ ಒಂದು, ಬಾಗಿಲು ಮೂರು ಆಗಿವೆ. ಮೊದಲು ಅದನ್ನು ಸರಿಪಡಿಸಿಕೊಳ್ಳಲಿ. ಹೀಗಾಗಿ ಯತ್ನಾಳ ಅವರ ಹೇಳಿಕೆ ಅವರ ವ್ಯಯಕ್ತಿಕ ಹೇಳಿಕೆಯಾಗಿದೆ ಎಂದರು.

ಇನ್ನೂ ಸಾರಿಗೆ ನೌಕರರ  ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಎಲ್ಲರನ್ನೂ ಕರೆದು ಮಾತನಾಡಿದ್ದೇನೆ. ಕೊರೋನಾ ಸಂದರ್ಭದಲ್ಲಿ ಪ್ರತಿಭಟನೆ ಮಾಡುವುದು ಒಳ್ಳೆಯದಲ್ಲ, ಅದನ್ನು ಕೈ ಬಿಡಿ ಎಂದು ಹೇಳಿದ್ದೇನೆ ಎಂದರು.

ಚುನಾವಣೆ ಹಿನ್ನಲೆಯಲ್ಲಿ ಯಾವುದೇ ಭರವಸೇ ನೀಡಲು ಆಗುವುದಿಲ್ಲ. ಬರುವ ಮೇ 4ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಸಧ್ಯ ಇದನ್ನು ಮುಂದಕ್ಕೆ ಹಾಕಬೇಕು ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss