ಹೊಸ ದಿಗಂತ ವರದಿ,ನರಗುಂದ:
ಪಟ್ಟಣದಿಂದ ಸವದತ್ತಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗಿ ಬರುವ ಸದ್ಭಕ್ತರ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ಶನಿವಾರ ಸಂಜೆ ಜರುಗಿದೆ.
ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಎಸ್.ಕೆ ಕಲ್ಲಾಪೂರ ಗ್ರಾಮದ ಟ್ರ್ಯಾಕ್ಟರ ಯಲ್ಲಮ್ಮನ ಗುಡ್ಡಕ್ಕೆ ಹೋಗಿ ಬರುವಾಗ ರಸ್ತೆ ಬದಿ ಪಲ್ಟಿಯಾಗಿದೆ. ಟ್ರ್ಯಾಕ್ಟರ ಚಾಲಕ ಮಂಜುನಾಥ ಕರಡಿಗುಡ್ಡ ಹಾಗೂ ಯಲ್ಲಪ್ಪ ಕರಡಿಗುಡ್ಡ ಇವರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಯಲ್ಲಪ್ಪ ಕರಡಿಗುಡ್ಡ ಇತನನ್ನು ಹೆಚ್ವಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ. ಇನ್ನೂಳಿದ 15 ರಿಂದ 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ತಾಲೂಕ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಕುರಿತು ನರಗುಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



