ಅಗತ್ಯಬಿದ್ದರೆ ಸಿಐಡಿಯಿಂದ ಯಡಿಯೂರಪ್ಪ ಬಂಧನ: ಡಾ ಜಿ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೊಟೀಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!