ಯಡಿಯೂರಪ್ಪ ಬೆನ್ನಲ್ಲೇ ಚುನಾವಣೆಯಿಂದ ನಿವೃತ್ತಿ ಘೋಷಿಸಿದ ಮತ್ತೊಬ್ಬ ಬಿಜೆಪಿಯ ನಾಯಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು, ಇದರ ಬೆನ್ನಲ್ಲೇ ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಘೋಷಿಸಿದ್ದಾರೆ.

ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದ್ದಾರೆ.
ಇನ್ನು ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ ಎಂದರು.
ಇನ್ನು ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೆ ಎಂದು ಬಸವರಾಜ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!