ಹೊಸ ದಿಗಂತ ವರದಿ, ಮಂಡ್ಯ:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 80ನೇ ವರ್ಷದ ಜನ್ಮದಿನ ಪ್ರಯುಕ್ತ ನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಉರುಳುಸೇವೆ ನೆರವೇರಿಸಿದರು.
ಬಳಿಕ ಮಾತನಾಡಿದ ಬಿಜೆಪಿ ಯುವಮುಖಂಡ ಶಿವಕುಮಾರ ಆರಾಧ್ಯ, ಕರ್ನಾಟಕ ರಾಜಕೀಯ ರಂಗದಲ್ಲಿ ಬಿಜೆಪಿ ಮುನ್ನೆಲೆಗೆ ಬರಲು ಬಿ.ಎಸ್. ಯಡಿಯೂರಪ್ಪನವರ ಪಾತ್ರ ಅತಿ ಮಹತ್ವದ್ದಾಗಿದೆ, 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಪಾರ ಜನಪರ ಯೋಜನೆಗಳನ್ನು ಜಾರಿಗೆ ತಂದು ಲೋಕಮಾನ್ಯರಾಗಿದ್ದಾರೆ ಎಂದು ನುಡಿದರು.
2008ಕ್ಕೂ ಮುನ್ನ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಇವರು ಗೆಲುವು ಸಾಧಿಸಿ ಶಾಸಕರಾದಾಗ ಕರ್ನಾಟಕದಲ್ಲಿ ಬಿಜೆಪಿಗೆ ನೆಲೆಯೇ ಇರಲಿಲ್ಲ. ಆದರೆ 2008 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ನೇತೃತ್ವ ವಹಿಸಿದ್ದ ಯಡಿಯೂರಪ್ಪನವರು ಕರ್ನಾಟಕದಲ್ಲಿ ಬಿಜೆಪಿಗೆ ದೊಡ್ಡ ಮಟ್ಟದ ಜಯ ತಂದುಕೊಟ್ಟು 2008 ರ ಮೇ 30 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ಸ್ಮರಿಸಿದರು.