ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ತರುವುದೇ ಯಡಿಯೂರಪ್ಪರ ಕನಸು: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ, ರಾಣೆಬೆನ್ನೂರ 

ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎನ್ನುವುದು ಬಿ.ಎಸ್. ಯಡಿಯೂರಪ್ಪ ಅವರ ಕನಸಾಗಿರುವ ಹಾಗೂ ಸಂಕಲ್ಪ ಮಾಡಿರುವ ಹಿನ್ನಲೆಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದ ಹವಾಲ್ದಾರ್ ಹೊಂಡದ ಬಳಿ ಬುಧವಾರ ಆಯೋಜಿಸಿದ್ದ ಬಿಜೆಪಿ ಯುವ ಮೋರ್ಚಾ ಜಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿಯ ಭದ್ರಕೋಟೆಯಾಗಿರುವ ಹಾವೇರಿ ಜಿಲ್ಲೆಯ ೬ ವಿಧಾನಸಭೆ ಕ್ಷೇತ್ರದಲ್ಲೂ ಮತ್ತೆ ಬಿಜೆಪಿ ಗೆಲ್ಲಿಸಬೇಕು. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ಅಭಿವೃದ್ಧಿಯ ಆಡಳಿತ ನೋಡಲು ಜನತೆ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ವಿನಂತಿಸಿಕೊಂಡರು.
ಕಾಂಗ್ರೆಸ್‌ನವರು ಬಿಜೆಪಿ ಏನು ಅಭಿವೃದ್ಧಿ ಮಾಡಿದೆ ಎಂದು ಕೇಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರದಲ್ಲೂ ಸಮಾವೇಶ ಮಾಡುವ ಮೂಲಕ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜಾರಿಗೆ ಆಗಿರುವ ಕುರಿತು ತಿಳಿಸುತ್ತಿzವೆ. ಈ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ತರುವ ಕಾರ್ಯ ನಮ್ಮಿಂದ ನಡೆಯುತ್ತಿದೆ ಎಂದರು.
ಇಡೀ ವಿಶ್ವಕ್ಕೆ ಒಬ್ಬ ಶಕ್ತಿಯುತ ನಾಯಕತ್ವ ಬೇಕಿತ್ತು. ಅದು ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಧ್ಯವಾಗಿದೆ. ರಷ್ಯಾ-ಯೂಕ್ರೇನ್ ಯುದ್ಧ ನಿಲ್ಲಿಸಬೇಕು ಎಂದು ಹೇಳುವ ಎದೆಗಾರಿಕೆ ಯಾರಿಗೂ ಇಲ್ಲ. ಆದರೆ, ಪ್ರಧಾನಿ ಮೋದಿಯವರು ಯುದ್ಧ ನಿಲ್ಲಿಸಿ, ಯುದ್ಧ ಅಭಿವೃದ್ಧಿ ದೃಷ್ಟಿಯಿಂದ ಸರಿಯಲ್ಲ ಎಂದು ಹೇಳಿರುವುದು ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಮತಗಳು ಕೈ ತಪ್ಪುತ್ತವೆ ಎಂಬ ಕಾರಣಕ್ಕೆ ಕಾಂಗ್ರೆಸ್‌ನವರು ಕಾಶ್ಮೀರದಲ್ಲಿ ಉಗ್ರರ ಬೆನ್ನು ಮೂಳೆ ಮುರಿಯಲಿಲ್ಲ. ಅವರ ಅಟ್ಟಹಾಸ ಬಂದ್ ಮಾಡಲಿಲ್ಲ. ಆದರೆ, ಮೋದಿಯವರು ೩೭೦ ಕಲಂ ತೆರವುಗೊಳಿಸಿ ಅವರ ಅಟ್ಟಹಾಸ ತಡೆದರು. ಇದರಿಂದ ಸಾವಿರಾರು ಯೋಧರು ಪ್ರಾಣ ಕಳೆದುಕೊಳ್ಳುವುದು ನಿಂತಿದೆ. ಮಹಿಳೆಯರಿಗೆ ಆಗುತ್ತಿರುವ ನ್ಯಾಯ ನಿಂತಿದೆ. ಕಾಂಗ್ರೆಸ್‌ಗೆ ದೇಶದ ಯುವಕರ, ರೈತರ ಮೇಲೆ ಚಿಂತನೆಯಿಲ್ಲ ಎಂದರು.
ಸ್ವಾತಂತ್ರೃ ಬಂದ ನಂತರ ಆಡಳಿತ ನಡೆಸಿದ ಕಾಂಗ್ರೆಸ್ ಸರ್ವರಿಗೂ ರಸ್ತೆ, ನೀರು, ಆಹಾರ, ವಿದ್ಯುತ್ ಸಹ ಒದಗಿಸಲು ಸಾಧ್ಯವಾಗಲಿಲ್ಲ. ಆದರೆ, ಬಿಜೆಪಿ ಅದನ್ನು ಕೆಲವೇ ವರ್ಷದಲ್ಲಿ ಮಾಡಿ ತೋರಿಸಿದೆ. ಕಾಂಗ್ರೆಸ್‌ನವರು ಗರೀಬಿ ಹಠಾವೋ ಎಂದರು. ಆದರೆ, ಕಾಂಗ್ರೆಸ್‌ಗೆ ಮಾತ್ರ ಬಡತನ ಹೋಯಿತು. ಜನರಿಗೆ ಹೋಗಲಿಲ್ಲ ಎಂದು ಕಾಂಗ್ರಸ್ ವಿರುದ್ಧ ಹರಿಹಾಯ್ದರು.
ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಉಪ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ಗೆಲುವು ಸಾಧಿಸಿ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿzವೆ. ೨೦೬ ಕೋಟಿ ರೂ. ವೆಚ್ಚದಲ್ಲಿ ಕೆರೆ ತುಂಬಿಸುವ ಕೆಲಸ ಮಾಡಿವೆ. ೪೫ ಕೋಟಿ ರೂ. ನಗರದ ಅಭಿವೃದ್ಧಿ ಮಾಡಿzವೆ. ಬಿಜೆಪಿ ಎಂದರೆ ಅಭಿವೃದ್ಧಿ, ಅಭಿವೃದ್ಧಿ ಎಂದರೆ ಬಿಜೆಪಿ. ರಾಣೆಬೆನ್ನೂರಿನಲ್ಲಿ ಬಿಜೆಪಿ ಪಕ್ಷ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪಕ್ಷದ ಜಿಧ್ಯP ಸಿದ್ದರಾಜ ಕಲಕೋಟಿ, ಭಾರತಿ ಅಳವಂಡಿ, ಭಾರತಿ ಜಂಬಗಿ, ಡಾ. ಬಸವರಾಜ ಕೇಲಗಾರ, ಚೋಳಪ್ಪ ಕಸವಾಳ, ಎ.ಬಿ. ಪಾಟೀಲ, ಪ್ರಕಾಶ ಪೂಜಾರ ಮಾತನಾಡಿದರು. ರಾಣೆಬೆನ್ನೂರ ನಗರಕ್ಕೆ ಬಂದ ಬಿ.ವೈ.ವಿಜಯೇಂದ್ರ ಅವರನ್ನು ಮಾಗೋಡ ಕ್ರಾಸ್‌ನಿಂದ ಕಾರ್ಯಕ್ರಮದ ವೇದಿಕೆವರೆಗೂ ಬೈಕ್ ರ‍್ಯಾಲಿ ಮೂಲಕ ಕರೆತರಲಾಯಿತು. ರಸ್ತೆಯುದ್ದಕ್ಕೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂವಿನ ಮಳೆ ಹರಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎ.ಎಚ್.ಶಿವಯೋಗಿ, ಪ್ರಮುಖರಾದ ಕೆ. ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಮಲ್ಲಣ್ಣ ಅಂಗಡಿ ಹಾಗೂ ಪPದ ಮುಖಂಡರು, ಕಾರ್ಯಕರ್ತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!