ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಸ್ವಾಗತಿಸಿದ ಯಡಿಯೂರಪ್ಪ, ಶಾಮನೂರು ನಮ್ಮ ಸಮಾಜದ ಹಿರಿಯ ಮುಖಂಡರ ಆಶೀರ್ವಾದ ಪಡೆದಿರುವುದು ಸಂತಸ ತಂದಿದೆ ಎಂದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ರಾಘವೇಂದ್ರರನ್ನು ಗೆಲ್ಲಿಸಲು ಶ್ಯಾಮನೂರು ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ರಾಘವೇಂದ್ರ ಮಾಡಿರುವ ಕೆಲಸ ಮೆಚ್ಚಿ ಅವರನ್ನು ಪುನರಾಯ್ಕೆ ಮಾಡಬೇಕೆಂದು ಹೇಳಿರೋದು ನಮ್ಮ ಸಮಾಜದ ಬಂಧುಗಳಿಗೆ, ಕಾರ್ಯಕರ್ತರಿಗೆ ಸಂತೋಷ ತಂದಿದೆ ಎಂದರು.