ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಆಗೋವರೆಗೂ ನಾನು ಬಿಜೆಪಿಗೆ ವಾಪಸ್ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಪಥ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್‌ರನ್ನ ವಾಪಸ್ ಬಿಜೆಪಿಗೆ ತರಲು ರಮೇಶ್ ಜಾರಕಿಹೊಳಿ ಫಡ್ನವಿಸ್ ಜೊತೆ ಮಾತುಕತೆ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಕೃಷ್ಣ ಮತ್ತು ಭೀಮಾ ನದಿಗೆ ನೀರು ಬಿಡುವಂತೆ ಫಡ್ನವಿಸ್ ಭೇಟಿಯಾಗಿದ್ದು. ನನ್ನ ಸಲುವಾಗಿ ಚರ್ಚೆ ಮಾಡೋದು ಅವಶ್ಯಕತೆ ಇಲ್ಲ. ಯಾಕೆಂದರೆ 6 ವರ್ಷ ಹೊರಗೆ ಹಾಕಿದ್ದಾರೆ. ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿಯಾಗುವವರೆಗೆ ನಾನು ಬಿಜೆಪಿಗೆ ಹೋಗಲ್ಲ ಎಂದರು.