ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬಹಳ ಸಂಭ್ರಮದಿಂದ ಅವರ ಜನ್ಮದಿನವನ್ನು ರಾಜ್ಯದೆಲ್ಲೆಡೆ ಆಚರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೋರಾಟಗಾರ, ಮಾಜಿ ಸಿಎಂ ಮತ್ತು ನನ್ನ ಪೂಜ್ಯ ತಂದೆಯವರಾದ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನ. ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರು ಆಸ್ಪತ್ರೆಗಳಿಗೆ ಭೇಟಿ ನೀಡಿ ಹಣ್ಣು ಹಂಚುವ ಕಾರ್ಯ ನೆರವೇರಿಸುತ್ತಿದ್ದಾರೆ. ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸುತ್ತಿದ್ದಾರೆ ಎಂದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆ, ಬೈಸಿಕಲ್ ಯೋಜನೆಗಳನ್ನು ಜಾರಿಗೊಳಿಸಿದ್ದರು. ಆ ಫಲಾನುಭವಿಗಳನ್ನು ನಮ್ಮ ಕಾರ್ಯಕರ್ತರು ಭೇಟಿ ಮಾಡುತ್ತಿದ್ದಾರೆ. ಯಡಿಯೂರಪ್ಪನವರ ಜನ್ಮದಿನವನ್ನು ಸರಳವಾಗಿ ಮತ್ತು ಅಭಿಮಾನದಿಂದ ಕಾರ್ಯಕರ್ತರು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ ಎಂದು ವಿವರಿಸಿದರು.